Friday, March 21, 2008

ಮತ್ತೆ ಹಳೆಯ ನೆನಪುಗಳು...

ಆಕೆಯನ್ನು ನಾನ್ಯಾವತ್ತೂ ಮರೆಯಲು ಸಾಧ್ಯವಿಲ್ಲ... ಏಕೆಂದರೆ ಜೀವನದಲ್ಲಿ ನಾನು ಮೊತ್ತ ಮೊದಲು ಇಷ್ಟಪಟ್ಟಿದ್ದ ಹುಡುಗಿ ಅವಳಾಗಿದ್ದಳು... ಆರಂಭದಲ್ಲಿ ಅದೊಂಥರ ಹುಚ್ಹು ಪ್ರೀತಿಯಾಗಿತ್ತು. ಪ್ರಥಮ ಪಿ.ಯು.ಸಿ ವಿದ್ಯಾರ್ಥಿಯೊಬ್ಬನ ಮನಸಿನಲ್ಲಿ ಮೊಳಕೆಯೊಡೆದಿದ್ದ ಅಪ್ರಭುದ್ದ, ಅಪಕ್ವ ಪ್ರೀತಿ.. ಪಿ.ಯು.ಸಿ ಮುಗಿಯಿತು. Degree life ಆರಂಭವಾಯಿತು. ಆದರೂ ನಾನವಳಲ್ಲಿ ನನ್ನ ಪ್ರೀತಿಯನ್ನು ತಿಳಿಸಿರಲಿಲ್ಲ. ಅವಳಿಗೆ ಇಷ್ಟವಿದೆಯೋ ಇಲ್ಲವೋ ಎಂದು ಕೂಡ ಗೊತ್ತಿರಲಿಲ್ಲ. ಆದ್ರೂ ಪ್ರೀತಿಸ್ತಿದ್ದೆ, ಆರಾಧಿಸ್ತಿದ್ದೆ.. ಕೊನೆಗೂ ದ್ವಿತೀಯ ಪದವಿಯಲ್ಲಿ ನಾನವಳ ಮುಂದೆ ಮನ ಬಿಚ್ಹಿದ್ದೆ. ಆದ್ರೆ "ನೋಡು, ನಾ ನಿನ್ನ ಇಷ್ಟಪಡ್ತಿದ್ದೀನಿ", ಅಂದಾಗ "ನಂಗೊತ್ತಿತ್ತು" ಅಂದಿದ್ದಳು.. ಅದು ಹೇಗೆ ಅವಳಿಗೆ ತಿಳಿದಿತ್ತೋ ನನಗರಿಯದು. ಏಕೆಂದರೆ ನಾನು ಯಾವುದೇ ಗೆಳೆಯರಲ್ಲೂ ಆ ಪ್ರೀತಿಯ ಬಗ್ಗೆ ತಿಳಿಸಿರಲಿಲ್ಲ. ಮತ್ತು ತಪ್ಪಿಯೂ ವಿಶೇಷವಾಗಿ ಅವಳನ್ನು ಮಾತನಾಡಿಸುವುದಾಗಲಿ, ನೋಡುವುದಾಗಲಿ ಇರಲಿಲ್ಲ.. ಪ್ರೀತಿ ಮನಸೊಳಗೆ ಇತ್ತೇ ವಿನಃ ಹೊರಬಂದಿರಲಿಲ್ಲ. ನಾನವಳನ್ನು ಇಷ್ಟಪಡ್ತಿದ್ದೀನಿ ಅಂದಾಗ "ಆಗಲ್ಲ" ಅಂದಿದ್ದಳು. ಏಕೆಂದು ಪ್ರಶ್ನಿಸಿದಾಗ, "ಮನೆಯಲ್ಲಿ ಗೊತ್ತಾದ್ರೆ problem ಆಗುತ್ತೆ" ಎಂಬ ಉತ್ತರ ಬಂದಿತ್ತು.. ಅವತ್ತೇ ಕೊನೆ, ಮತ್ತೆಂದೂ ನಾನವಳಲ್ಲಿ ಮಾತನ್ನೇ ಆಡಿರಲಿಲ್ಲ... ಯಾಕಂದ್ರೆ ಅವಳು ನನ್ನ ಮುಖವನ್ನೇ ನೋಡ್ತಿರಲಿಲ್ಲ...!
ಇವೆಲ್ಲ ಕಳೆದು ಹೆಚ್ಹು ಕಡಿಮೆ ಎರಡುವರೆ ವರ್ಷಗಳಾಗಿವೆ. ನನಗೀಗಲೂ ಅವಳ ಮೇಲೆ ಗೌರವವಿದೆ. ಯಾಕಂದ್ರೆ ನಾನವತ್ತು ಅವಳನ್ನು ಇಷ್ಟಪಡ್ತಿದ್ದೀನಿ ಅಂದಾಗ "ಮನೆಯಲ್ಲಿ ಗೊತ್ತಾದ್ರೆ problem ಆಗುತ್ತೆ" ಅಂದ್ದಿದ್ದಳಲ್ಲ... ಮನೆಯವರ ಬಗ್ಗೆ ಯೋಚನೆ ಮಾಡಿದ್ಳಲ್ಲ... ಅದ್ಕೇ.. ಈಗಲೂ ನನ್ನನ್ನೊಂದು ಪ್ರಶ್ನೆ ಕಾಡ್ತಿದೆ. ಮನೆಯಲ್ಲಿ ಗೊತ್ತಾಗದೆ ಇದ್ರೆ ಅವಳು ನನ್ನನ್ನು ಇಷ್ಟಪಡ್ತಿದ್ಳಾ? ಅವಳಿಗೆ ನನ್ ಮೇಲೆ ಸ್ವಲ್ಪನಾದ್ರೂ ಪ್ರೀತಿ ಇತ್ತಾ? ಅದೇನೆ ಇರಲಿ ಅಂದಿನ ಅವಳ ನಿರ್ಧಾರಕ್ಕೆ ಹ್ಯಾಟ್ಸಾಫ್... ನಾನೇನೋ ಭಗ್ನ ಪ್ರೇಮಿಯಾದೆ, ಆದ್ರೂ ತೊಂದ್ರೆ ಇಲ್ಲ.. ಅವಳು ಮನೆಯವರ ಮುಂದೆ ತಲೆತಗ್ಗಿಸುವ ಹಾಗಾಗಲಿಲ್ಲವಲ್ಲ...
ಇವನ್ನೆಲ್ಲಾ ಈಗ ಯಾಕೆ ಬರಿತಿದ್ದೇನೆ ಅಂದ್ರೆ, ಕೆಲವೇ ದಿನಗಳಲ್ಲಿ ಅವಳ ಮದುವೆ ನಡೆಯಲಿದೆ... ಅವಳು ಮದುವೆಗೆ ನನ್ನನ್ನು ಕರೆಯದೇ ಇದ್ರೂ ತೊಂದ್ರೆ ಇಲ್ಲ.. ನನ್ ಕಡೆಯಿಂದ HAPPY MARRIED LIFE.......
ಪ್ರೀತಿಯಿಂದ ಸುನಿಲ್.....

5 comments:

Anonymous said...

ಚೆನ್ನಾಗಿದೆ... ಬರಹ...
ಆಕೆ ಆ ಥರ ಹೇಳಿದ್ದಕ್ಕೆ ನಿಂಗೆ ಖುಷಿಯಾಗಿದೆ ಅಂತಿದ್ದೀಯಲ್ಲಾ... ಆದ್ರೆ ಆಕೆಗೆ ಹೇಳ್ಬಹುದಿತ್ತು. ನಂಗೆ ಇಷ್ಟ ಇದೆ. ಸಮಸ್ಯೆ ಈ ಥರಾ ಅಂತ ಅಲ್ವಾ... ಇರಲಿ...ನಿನ್ನ ಮನೋಭಾವ ಚೆನ್ನಾಗಿದೆ. ಅದು ಖುಷಿಯಾಯ್ತು.
ಗೆಳೆಯ.

Shree said...

ಇಷ್ಟ ಇದೆ ಅಂತ ಆದ್ರೆ ಓಕೆ. ಅದು ನಿಂಗೇ ಸೇರ್ಬೇಕು ಅಂತ ಯಾಕೆ? ’ಭಗ್ನಪ್ರೇಮಿ’ ಅನ್ನೋ ಶಬ್ದದ ಅರ್ಥ ಗೊತ್ತಾ? ಇದನ್ನೆಲ್ಲ ಭಗ್ನಪ್ರೇಮ ಅಂತ ಅಂದ್ಕೊಂಡು ದೇವದಾಸನ್ ಥರಾ ಪೋಸ್ ಕೊಡೋದು ತಪ್ಪು ಅಂತ ನನ್ನ ವೈಯಕ್ತಿಕ ಅಭಿಪ್ರಾಯ :)

ಶ್ರೀನಿಧಿ.ಡಿ.ಎಸ್ said...

ಬದ್ನೇ ಕಾಯಿ ಗೊತ್ತಾ ನಿಂಗೆ?:)

damodara dondole said...

nanu e lekanadalli jivantha shava vagiddene
Damu Dondole

ಕೆ. ರಾಘವ ಶರ್ಮ said...

Idella bittu bidappa....